
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್ ಅವರನ್ನು ಭೇಟಿ ಮಾಡಿ, ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳಿಗೆ ಕೇಂದ್ರದ ನೆರವು ಮತ್ತು ಬಾಕಿ ಇರುವ ಅನುಮತಿಗಳನ್ನು ನೀಡುವಂತೆ ಮನವಿ ಮಾಡಿದ್ದಾರೆ.
ಮೇಕೆದಾಟು ಸಮತೋಲನ ಜಲಾಶಯ ಮತ್ತು ಕುಡಿಯುವ ನೀರಿನ ಯೋಜನೆಗೆ ಸಲ್ಲಿಸಿರುವ ₹16,745 ಕೋಟಿ ಮೊತ್ತದ ಡಿಪಿಆರ್ ಅನ್ನು ಆದ್ಯತೆ ಮೇರೆಗೆ ಪರಿಶೀಲಿಸಿ, ಮಂಜೂರಾತಿ ನೀಡುವಂತೆ ಸಿಡಬ್ಲ್ಯೂಸಿ ಗೆ ನಿರ್ದೇಶನ ನೀಡಲು ವಿನಂತಿಸಿದ್ದಾರೆ.
ಕೃಷ್ಣಾ ಮೇಲ್ದಂಡೆ ಯೋಜನೆ ಜಾರಿಗೆ ಸಂಬಂಧಿಸಿದಂತೆ ಕೃಷ್ಣಾ ಜಲ ವಿವಾದ ನ್ಯಾಯಾಧಿಕರಣ-II ತೀರ್ಪಿನ ಅಧಿಸೂಚನೆ ಹೊರಡಿಸಲು ಸುಪ್ರೀಂ ಕೋರ್ಟ್ನಲ್ಲಿ ಮಧ್ಯಂತರ ಅರ್ಜಿ ಸಲ್ಲಿಸುವಂತೆ ಜಲಶಕ್ತಿ ಸಚಿವಾಲಯಕ್ಕೆ ಮನವಿ ಮಾಡಿದ್ದಾರೆ.