
ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಬಳಕೆಯನ್ನು ಕಡ್ಡಾಯಗೊಳಿಸಲಾಗಿದೆ ಎಂದು ತಿಳಿಸಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ, ನಿರ್ಲಕ್ಷ್ಯ ತೋರಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ರಾಜ್ಯಾದ್ಯಂತ ಮಹಾನಗರ ಪಾಲಿಕೆ ಹಾಗೂ ಜಿಲ್ಲಾ ಕೇಂದ್ರಗಳಲ್ಲಿ ಪರಿಶೀಲನೆ ನಡೆಸಲಾಗುವುದು ಎಂದು ತಿಳಿಸಿದ ಅವರು, ನಮ್ಮ ಮಾತೃಭಾಷೆಯನ್ನು ಮುಂದಿನ ಪೀಳಿಗೆಗೆ ಉಳಿಸಿ ಹಸ್ತಾಂತರಿಸುವುದು ಅಮೂಲ್ಯ ಆಸ್ತಿಯಾಗಿದೆ ಎಂದಿದ್ದಾರೆ.
ಇದೇ ವೇಳೆ ಕರ್ನಾಟಕ ರಕ್ಷಣಾ ವೇದಿಕೆಯು ಬೆಂಗಳೂರು ಐಟಿ-ಬಿಟಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗಾವಕಾಶ ನೀಡುವಂತೆ ಆಗ್ರಹಿಸಿ ಆಗ್ರಹ ಅಭಿಯಾನ ಆರಂಭಿಸಿದ್ದು, ಖಾಸಗಿ ಸಂಸ್ಥೆಗಳಿಗೆ ಭೇಟಿ ನೀಡಿ ಆಗ್ರಹ ಪತ್ರ ಸಲ್ಲಿಸಿದೆ.