
ಹಾವೇರಿ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಿ ಪರಿಹಾರ ನೀಡುವಂತೆ ಆಗ್ರಹಿಸಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಸೆಪ್ಟೆಂಬರ್ 7ರಂದು ಒಂದು ದಿನದ ಧರಣಿ ನಡೆಸಲಿವೆ.
ಸೆಪ್ಟೆಂಬರ್ 21ರಂದು ನಡೆಯಲಿರುವ ವಿಶೇಷ ಅಧಿವೇಶನದಲ್ಲಿ ರಾಣೆಬೆನ್ನೂರು ತಾಲ್ಲೂಕನ್ನು ಬರಪೀಡಿತ ಎಂದು ಘೋಷಿಸದಿದ್ದರೆ ಮುಂದಿನ ದಿನಗಳಲ್ಲಿ ಪ್ರತಿಭಟನೆ ತೀವ್ರಗೊಳಿಸುವುದಾಗಿ ಮಾಜಿ ಶಾಸಕ ಅರುಣಕುಮಾರ ಪೂಜಾರ ಎಚ್ಚರಿಸಿದ್ದಾರೆ.
ಈ ಧರಣಿಯಲ್ಲಿ ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಮಂಜುನಾಥ ಗೌಡಶಿವಣ್ಣನವರ ಸೇರಿದಂತೆ ಹಲವು ಮುಖಂಡರು ಭಾಗವಹಿಸಲಿದ್ದಾರೆ ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಲಾಗಿದೆ.