
ರಾಜ್ಯದ ತಾಲೂಕು ಆಸ್ಪತ್ರೆಗಳು, ಸಮುದಾಯ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ತಜ್ಞ ವೈದ್ಯರ ಕೊರತೆ ನೀಗಿಸಲು ಸರ್ಕಾರಿ ಹಾಗೂ ಖಾಸಗಿ ವೈದ್ಯಕೀಯ ಕಾಲೇಜುಗಳಿಗೆ ಆರೋಗ್ಯ ಕೇಂದ್ರಗಳನ್ನು ದತ್ತು ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಈ ಯೋಜನೆಯಡಿ ಪ್ರತಿ ವೈದ್ಯಕೀಯ ಕಾಲೇಜು ತಲಾ ಒಂದು ತಾಲೂಕು ಆಸ್ಪತ್ರೆ, ಸಮುದಾಯ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ದತ್ತು ಪಡೆಯಲಿದ್ದು, ತಾಲೂಕು ಮಟ್ಟದಲ್ಲೇ ಪ್ರಮುಖ ಪರಿಣಿತ ವೈದ್ಯರ ಸೇವೆ ಸಿಗಲಿದೆ.
ದತ್ತು ಪಡೆದ ಪ್ರತಿ ಆಸ್ಪತ್ರೆಯಲ್ಲಿ ವೈದ್ಯರ ಸೇವಾ ದಿನಗಳ ಮಾಸಿಕ ವೇಳಾಪಟ್ಟಿ ನಿಗದಿಪಡಿಸಿ, ಸೇವೆ ಹಾಗೂ ಚಿಕಿತ್ಸೆಯ ಗುಣಮಟ್ಟವನ್ನು ಮಾಸಿಕವಾಗಿ ಮೇಲ್ವಿಚಾರಣೆ ಮಾಡಲಾಗುತ್ತದೆ.