
ನೇಪಾಳದಲ್ಲಿ ಸಂಭವಿಸಿದ ಭೀಕರ ಪ್ರವಾಹದಲ್ಲಿ ಮೃತಪಟ್ಟವರ ಸಂಖ್ಯೆ 538ಕ್ಕೆ ಏರಿಕೆಯಾಗಿದ್ದು, ನಾಪತ್ತೆಯಾದವರಲ್ಲಿ 320 ಭಾರತೀಯರ ಸುಳಿವು ಇನ್ನೂ ಸಿಕ್ಕಿಲ್ಲ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.
ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಿಲುಕಿದ್ದ 21 ಭಾರತೀಯರು ದೆಹಲಿಗೆ ಸುರಕ್ಷಿತವಾಗಿ ಮರಳಿದ್ದು, ಚೀನಾದ ಗಡಿಯಲ್ಲಿರುವ ಸುಮಾರು 400 ಭಾರತೀಯರು ಸುರಕ್ಷಿತವಾಗಿದ್ದಾರೆ ಎಂದು ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದ್ದಾರೆ.
ಭಾರತವು ನೇಪಾಳಕ್ಕೆ ಈಗಾಗಲೇ 60 ಟನ್ ಪರಿಹಾರ ಸಾಮಗ್ರಿಗಳನ್ನು ಕಳುಹಿಸಿದ್ದು, ರಕ್ಷಣಾ ಕಾರ್ಯಾಚರಣೆಗಾಗಿ ಸುರಂಗ ರಕ್ಷಣಾ ತಂಡ ಮತ್ತು ಎನ್‌ಡಿಆರ್‌ಎಫ್ ಪಡೆಯನ್ನು ಕಳುಹಿಸಲು ಸಿದ್ಧತೆ ನಡೆಸಿದೆ.