
ದುಲೀಪ್ ಟ್ರೋಫಿಯ ಕ್ವಾರ್ಟರ್ ಫೈನಲ್ ಪಂದ್ಯಗಳಲ್ಲಿ ಪೂರ್ವ ವಲಯ ಮತ್ತು ಉತ್ತರ ವಲಯ ತಂಡಗಳು ಜಯಗಳಿಸಿ ಸೆಮಿಫೈನಲ್ಗೆ ಪ್ರವೇಶ ಪಡೆದಿವೆ.
ಆಗಸ್ಟ್ 30ರಂದು ನಡೆಯುವ ಮೊದಲ ಸೆಮಿಫೈನಲ್ನಲ್ಲಿ ಕೇಂದ್ರ ವಲಯ ಮತ್ತು ಪೂರ್ವ ವಲಯ ತಂಡಗಳು, ಎರಡನೇ ಸೆಮಿಫೈನಲ್ನಲ್ಲಿ ದಕ್ಷಿಣ ವಲಯ ಮತ್ತು ಉತ್ತರ ವಲಯ ತಂಡಗಳು ಮುಖಾಮುಖಿಯಾಗಲಿವೆ.
ಬೆಂಗಳೂರಿನ ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್ನಲ್ಲಿ ನಡೆಯಲಿರುವ ಈ ಎರಡೂ ಪಂದ್ಯಗಳು ಬೆಳಿಗ್ಗೆ 9:30ಕ್ಕೆ ಆರಂಭವಾಗಲಿದ್ದು, ರಜತ್ ಪಾಟಿದಾರ್, ಇಶಾನ್ ಕಿಶನ್, ತಿಲಕ್ ವರ್ಮಾ ತಂಡಗಳನ್ನು ಮುನ್ನಡೆಸಲಿದ್ದಾರೆ.