
ದುಬೈನಲ್ಲಿ ಇದೇ 28ರಿಂದ ಪ್ರಾರಂಭವಾಗಲಿರುವ ಮಹಿಳೆಯರ ಏಷ್ಯಾ ಕಪ್ ಟಿ20 ಕ್ರಿಕೆಟ್ ಟೂರ್ನಿಯಲ್ಲಿ, ಭಾರತ ತಂಡವು ಸೆಪ್ಟೆಂಬರ್ 5ರಂದು ಪಾಕಿಸ್ತಾನವನ್ನು ಎದುರಿಸಲಿದೆ.
ಎ ಗುಂಪಿನಲ್ಲಿ ಭಾರತ, ಪಾಕಿಸ್ತಾನ, ಥಾಯ್ಲೆಂಡ್ ಮತ್ತು ಹಾಂಗ್‌ಕಾಂಗ್ ತಂಡಗಳಿದ್ದು, ಬಿ ಗುಂಪಿನಲ್ಲಿ ಶ್ರೀಲಂಕಾ, ಬಾಂಗ್ಲಾದೇಶ, ಯುಎಇ ಮತ್ತು ಇಂಡೋನೇಷ್ಯಾ ತಂಡಗಳು ಸ್ಥಾನ ಪಡೆದಿವೆ.
ಟೂರ್ನಿಯ ಸೆಮಿಫೈನಲ್ ಪಂದ್ಯಗಳು ಸೆಪ್ಟೆಂಬರ್ 10 ಮತ್ತು 11ರಂದು ನಡೆಯಲಿದ್ದು, ಫೈನಲ್ ಪಂದ್ಯವು ಸೆಪ್ಟೆಂಬರ್ 13ರಂದು ನಿಗದಿಯಾಗಿದೆ.