
ರಾಜ್ಯದ ಪಂಚತಾರಾ ಹೋಟೆಲ್‌ಗಳ ಮೇಲೆ ಆಹಾರ ಇಲಾಖೆ ನಡೆಸಿದ ದಾಳಿಯಲ್ಲಿ ಕೊಳೆತ ಈರುಳ್ಳಿ, ಅವಧಿ ಮುಗಿದ ಹಾಲು ಮತ್ತು ಹೆಪ್ಪುಗಟ್ಟಿದ ಮಾಂಸ ಪತ್ತೆಯಾಗಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.
ಪತ್ತೆಯಾದ ಆಹಾರ ಪದಾರ್ಥಗಳ ಮಾದರಿಗಳನ್ನು ತಪಾಸಣೆಗೆ ಕಳುಹಿಸಲಾಗಿದ್ದು, ಹೋಟೆಲ್‌ಗಳಲ್ಲಿ ಮಾಂಸದ ತಾಜಾತನದ ಬಗ್ಗೆ ಸೂಚನಾ ಫಲಕಗಳನ್ನು ಕಡ್ಡಾಯವಾಗಿ ಹಾಕುವಂತೆ ಸಚಿವರು ಸೂಚಿಸಿದ್ದಾರೆ.
ಮುಂದಿನ ದಿನಗಳಲ್ಲಿ ತಪಾಸಣೆ ಮುಂದುವರಿಯಲಿದ್ದು, ನಿಯಮಗಳನ್ನು ಉಲ್ಲಂಘಿಸುವ ಹೋಟೆಲ್‌ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಎಚ್ಚರಿಕೆ ನೀಡಿದ್ದಾರೆ.