
ಪ್ರಧಾನ ಮಂತ್ರಿ ಇ–ಬಸ್ ಸೇವಾ ಯೋಜನೆಯಡಿ ರಾಜ್ಯಕ್ಕೆ 750 ಎಲೆಕ್ಟ್ರಿಕ್ ಬಸ್‌ಗಳು ಮಂಜೂರಾಗಿದ್ದು, ಶಿವಮೊಗ್ಗ ಜಿಲ್ಲೆಗೆ 50 ಬಸ್‌ಗಳು ದೊರೆಯಲಿವೆ.
ಕೇಂದ್ರ ಸರ್ಕಾರವು ಈ ಯೋಜನೆಗಾಗಿ 20,000 ಕೋಟಿ ರೂ. ಅನುದಾನ ಒದಗಿಸುತ್ತಿದ್ದು, 10 ವರ್ಷಗಳ ಕಾಲ ಬಸ್‌ಗಳ ನಿರ್ವಹಣೆ ಮತ್ತು ಚಾರ್ಜಿಂಗ್ ಮೂಲಸೌಕರ್ಯ ಕಲ್ಪಿಸಲಿದೆ.
ಶಿವಮೊಗ್ಗದ ಬಸ್‌ಗಳ ಚಾರ್ಜಿಂಗ್ ಪಾಯಿಂಟ್ ಮತ್ತು ಸಬ್‌ಸ್ಟೇಷನ್ ನಿರ್ಮಾಣಕ್ಕೆ ಭದ್ರಾವತಿಯಲ್ಲಿ ಮೂರು ಎಕರೆ ಜಾಗ ಗುರುತಿಸಲಾಗಿದೆ ಎಂದು ಕೆಎಸ್‌ಆರ್‌ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.