
ರಾಜ್ಯದಲ್ಲಿ ಈ ಬಾರಿ ವಾಡಿಕೆ ಮಳೆಯ ಕೊರತೆಯಿಂದಾಗಿ ಒಟ್ಟು ಸರಾಸರಿ ಶೇ.36ರಷ್ಟು ಮಳೆ ಕೊರತೆ ಉಂಟಾಗಿದ್ದು, ಕೃಷಿ ಚಟುವಟಿಕೆಗಳ ಮೇಲೆ ಗಂಭೀರ ಪರಿಣಾಮ ಬೀರಿದೆ.
ಸರ್ಕಾರದ ಮಾರ್ಗಸೂಚಿಗಳ ಅನ್ವಯ ಮೊದಲ ಹಂತಗಳಲ್ಲಿ ಘೋಷಿಸಲಾದ ತಾಲೂಕುಗಳ ಜತೆಗೆ ಮತ್ತಷ್ಟು ಸೇರ್ಪಡೆಯಾಗಿ ಒಟ್ಟು 177 ತಾಲೂಕುಗಳು ಬರಪೀಡಿತ ಪ್ರದೇಶಗಳಾಗಿ ಘೋಷಣೆಯಾಗಿವೆ.
ಪರಿಸ್ಥಿತಿಯ ಮೌಲ್ಯಮಾಪನದ ಬಳಿಕ ಬರಪೀಡಿತ ತಾಲೂಕುಗಳ ಸಂಖ್ಯೆ ಸುಮಾರು 200ರವರೆಗೆ ತಲುಪುವ ಸಾಧ್ಯತೆಯಿದೆ ಎಂದು ಉಪಮುಖ್ಯಮಂತ್ರಿ ಡಿ. ಪರಮೇಶ್ವರ್ ತಿಳಿಸಿದ್ದಾರೆ.