
ಸಚಿವ ಸತೀಶ್ ಜಾರಕಿಹೊಳಿ ಅವರ ಬೆಳಗಾವಿ ನಿವಾಸ ಮತ್ತು ಕಚೇರಿಗಳ ಮೇಲೆ ಇಡಿ ಅಧಿಕಾರಿಗಳು ನಡೆಸಿದ 37 ಗಂಟೆಗಳ ಸುದೀರ್ಘ ಶೋಧ ಕಾರ್ಯ ಅಂತ್ಯಗೊಂಡಿದೆ.
ಸೆಪ್ಟೆಂಬರ್ 10ರ ಬೆಳಗ್ಗೆ 6 ಗಂಟೆಗೆ ಆರಂಭವಾದ ಈ ಪರಿಶೀಲನೆಯಲ್ಲಿ, ಅಧಿಕಾರಿಗಳು ಕೆಲವು ದಾಖಲೆಗಳನ್ನು ವಶಪಡಿಸಿಕೊಂಡಿದ್ದು, ನಗದು ಹಣವನ್ನು ಬ್ಯಾಂಕ್‌ಗೆ ರವಾನಿಸಿದ್ದಾರೆ.
ತನಿಖೆಗೆ ಸಹಕರಿಸುವುದಾಗಿ ತಿಳಿಸಿರುವ ಸತೀಶ್ ಜಾರಕಿಹೊಳಿ, ಸಿಕ್ಕಿರುವ ನಗದು ತಮ್ಮದೇ ಎಂದು ಸ್ಪಷ್ಟಪಡಿಸಿದ್ದು, ಮುಂದಿನ ದಿನಗಳಲ್ಲಿ ಸಿಎಂ ಭೇಟಿಯಾಗುವುದಾಗಿ ತಿಳಿಸಿದ್ದಾರೆ.