
ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಹನು ರಾಘವಪೂಡಿ ನಿರ್ದೇಶನದ 'ಫೌಜಿ' ಚಿತ್ರದ ಹೊಸ ಪೋಸ್ಟರ್ ಅನ್ನು ಚಿತ್ರತಂಡ ಬಿಡುಗಡೆ ಮಾಡಿದೆ.
ಪೋಸ್ಟರ್‌ನಲ್ಲಿ ಪ್ರಭಾಸ್ ಪಿಸ್ತೂಲ್ ಹಿಡಿದು ರಕ್ತಸಿಕ್ತ ಬಟ್ಟೆಯಲ್ಲಿ ಕಾಣಿಸಿಕೊಂಡಿದ್ದು, ಚಿತ್ರವು ಡಿಸೆಂಬರ್ 3ರಂದು ವಿಶ್ವದಾದ್ಯಂತ ಬಿಡುಗಡೆಯಾಗುವ ನಿರೀಕ್ಷೆಯಿದೆ.
ಈ ಚಿತ್ರದಲ್ಲಿ ಅನುಪಮ್ ಖೇರ್, ಮಿಥುನ್ ಚಕ್ರವರ್ತಿ ಮತ್ತು ಕನ್ನಡದ ನಟಿ ಚೈತ್ರಾ ಜೆ. ಆಚಾರ್ ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದು, ಮೈತ್ರಿ ಮೂವೀ ಮೇಕರ್ಸ್ ನಿರ್ಮಾಣ ಮಾಡುತ್ತಿದೆ.