
ಬೆಂಗಳೂರು ಉತ್ತರ ತಾಲೂಕಿನ ಗುಣಿ ಅಗ್ರಹಾರ ಹಾಗೂ ಲಕ್ಷ್ಮೀಪುರ ವ್ಯಾಪ್ತಿಯಲ್ಲಿ ಆಟೋದಲ್ಲಿ ಬಂದು ಸಿಲಿಂಡರ್‌ಗಳನ್ನು ಕದಿಯುವ ಗ್ಯಾಂಗ್ ಸಕ್ರಿಯವಾಗಿದೆ.
ಕಳೆದ ಕೆಲ ದಿನಗಳಲ್ಲಿ 10ಕ್ಕೂ ಹೆಚ್ಚು ಸಿಲಿಂಡರ್‌ಗಳನ್ನು ಕಳ್ಳತನ ಮಾಡಲಾಗಿದ್ದು, ಈ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ.
ಘಟನೆಗೆ ಸಂಬಂಧಿಸಿದಂತೆ ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಳ್ಳರಿಗಾಗಿ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ.