
ವಿಜಯಪುರ ಜಿಲ್ಲೆಯಾದ್ಯಂತ ವಿಶೇಷ ಕಾರ್ಯಾಚರಣೆ ನಡೆಸಿರುವ ಪೊಲೀಸರು, ಕಳೆದುಹೋಗಿದ್ದ ಬರೋಬ್ಬರಿ 537 ಮೊಬೈಲ್ ಫೋನ್ಗಳನ್ನು ಪತ್ತೆ ಹಚ್ಚಿದ್ದಾರೆ.
ಪತ್ತೆಯಾದ ಈ ಮೊಬೈಲ್ಗಳ ಒಟ್ಟು ಅಂದಾಜು ಮೌಲ್ಯ 1.07 ಕೋಟಿ ರೂಪಾಯಿಗಳಾಗಿದ್ದು, ಇವುಗಳನ್ನು ನೈಜ ವಾರಸುದಾರರಿಗೆ ಹಸ್ತಾಂತರಿಸಲಾಗಿದೆ.
ಕೇಂದ್ರ ಸರ್ಕಾರದ ಸಿಇಐಆರ್ ಪೋರ್ಟಲ್ ಅನ್ನು ಪರಿಣಾಮಕಾರಿಯಾಗಿ ಬಳಸಿ ಕಳೆದ ಮೂರು ತಿಂಗಳಲ್ಲಿ ಈ ಸಾಧನೆ ಮಾಡಲಾಗಿದೆ ಎಂದು ಎಸ್ಪಿ ತಿಳಿಸಿದ್ದಾರೆ.