
ಕೇರಳದ 105 ವರ್ಷದ ಭಗೀರಥಿ ಅಮ್ಮ ಅವರು ರಾಜ್ಯ ಸಾಕ್ಷರತಾ ಮಿಷನ್ ಪರೀಕ್ಷೆಯಲ್ಲಿ ಗಣಿತ ವಿಷಯದಲ್ಲಿ 75ಕ್ಕೆ 75 ಅಂಕಗಳನ್ನು (ಶೇ. 100) ಗಳಿಸಿ ಇತಿಹಾಸ ನಿರ್ಮಿಸಿದ್ದಾರೆ.
ಒಟ್ಟು 275 ಅಂಕಗಳ ಪೈಕಿ 205 ಅಂಕಗಳನ್ನು ಪಡೆದು ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾದ ಅವರು, ಪರೀಕ್ಷೆ ಬರೆದ ಅತ್ಯಂತ ಹಿರಿಯ ವಿದ್ಯಾರ್ಥಿನಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಅವರ ಈ ಅಸಾಧಾರಣ ಸಾಧನೆಯನ್ನು ಗುರುತಿಸಿ ಕೇಂದ್ರ ಸರ್ಕಾರವು ಪ್ರತಿಷ್ಠಿತ ನಾರಿ ಶಕ್ತಿ ಪುರಸ್ಕಾರ ನೀಡಿ ಗೌರವಿಸಿದೆ.