ಆಗಸ್ಟ್ 13ರಿಂದ 27ರವರೆಗೆ ನಡೆಯಲಿರುವ ವಿಧಾನಸಭೆ ಮತ್ತು ವಿಧಾನ ಪರಿಷತ್ ಅಧಿವೇಶನದ ಹಿನ್ನೆಲೆಯಲ್ಲಿ, ವಿಧಾನಸೌಧದ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್ ಕಮಿಷನರ್ ಸೀಮಾಂತ್‌ಕುಮಾರ್ ಸಿಂಗ್ ಆದೇಶಿಸಿದ್ದಾರೆ.
ವಿಧಾನಸೌಧದ 2 ಕಿ.ಮೀ ವ್ಯಾಪ್ತಿಯಲ್ಲಿ ಪ್ರತಿಭಟನೆ, ಮೆರವಣಿಗೆ ಮತ್ತು ಧರಣಿಗಳಿಗೆ ನಿರ್ಬಂಧ ವಿಧಿಸಲಾಗಿದ್ದು, ಫ್ರೀಡಂ ಪಾರ್ಕ್‌ನಲ್ಲಿ ಅನುಮತಿ ಪಡೆದ ಪ್ರತಿಭಟನೆಗಳಿಗೆ ಮಾತ್ರ ವಿನಾಯಿತಿ ನೀಡಲಾಗಿದೆ.
ಅಧಿವೇಶನದ ಕಲಾಪಗಳಿಗೆ ಅಡಚಣೆಯಾಗದಂತೆ ಮತ್ತು ಸಾರ್ವಜನಿಕ ಶಾಂತಿ ಹಾಗೂ ಸುಗಮ ಸಂಚಾರವನ್ನು ಕಾಪಾಡುವ ದೃಷ್ಟಿಯಿಂದ ಈ ಕಾನೂನು ಸುವ್ಯವಸ್ಥಾ ಕ್ರಮ ಕೈಗೊಳ್ಳಲಾಗಿದೆ.