
ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲಗೇಜ್ ಟ್ರಾಲಿಯ ಕೆಳಭಾಗದ ಗಾಲಿಯಲ್ಲಿ ಅಡಗಿಸಿ ಸಾಗಿಸಲು ಯತ್ನಿಸಿದ ₹1.79 ಕೋಟಿ ಮೌಲ್ಯದ ಚಿನ್ನವನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ ಜಪ್ತಿ ಮಾಡಿದೆ.
ಮಲೇಷ್ಯಾದ ಕೌಲಾಲಂಪುರದಿಂದ ಬೆಂಗಳೂರಿಗೆ ಆಗಮಿಸಿದ್ದ ಇಬ್ಬರು ಪ್ರಯಾಣಿಕರು ಚಿನ್ನದ ಪ್ಯಾಕೆಟ್‌ಗಳನ್ನು ಟ್ರಾಲಿಗಳ ಕೆಳಭಾಗಕ್ಕೆ ಅಂಟಿಸಿ ತೆರಳಿರುವುದು ತನಿಖೆಯಿಂದ ತಿಳಿದುಬಂದಿದೆ.
ಡಿಆರ್‌ಐ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ 999.9 ಶುದ್ಧತೆಯ ಒಟ್ಟು 1,200.40 ಗ್ರಾಂ ತೂಕದ 12 ಚಿನ್ನದ ಗಟ್ಟಿಗಳನ್ನು ಕಸ್ಟಮ್ಸ್ ಕಾಯ್ದೆಯಡಿ ವಶಪಡಿಸಿಕೊಂಡಿದ್ದು, ತನಿಖೆ ಮುಂದುವರಿದಿದೆ.