
ಸಾಮಾಜಿಕ ಜಾಲತಾಣಗಳಲ್ಲಿ ವಿಧ್ವಂಸಕ ಕೃತ್ಯಗಳ ಕುರಿತು ಚರ್ಚೆ ನಡೆಸುತ್ತಿದ್ದ ಜಾಲವನ್ನು ಕರ್ನಾಟಕ ರಾಜ್ಯ ಗುಪ್ತಚರ ಇಲಾಖೆ ಭೇದಿಸಿದ್ದು, ಮುಖ್ಯ ಆರೋಪಿ ಶಬ್ಬೀರ್ ಹಾಗೂ ಟೆಲಿಗ್ರಾಂ ಗ್ರೂಪ್ ಅಡ್ಮಿನ್ ಸಲಾಮಿನ್ ಅಲಿಯಾಸ್ ಸಲ್ಮಾನ್ ಎಂಬಿಬ್ಬರನ್ನು ಬಂಧಿಸಿದೆ.
ಉತ್ತರ ಪ್ರದೇಶ ಮೂಲದ ಸಲಾಮಿನ್ ಹಾಸನದಲ್ಲಿ ರಸ್ತೆ ನಿರ್ಮಾಣ ಕಾಮಗಾರಿಯಲ್ಲಿ ಕೆಲಸ ಮಾಡುತ್ತಿದ್ದು, ಇವರು ಸಕ್ರಿಯವಾಗಿದ್ದ ಟೆಲಿಗ್ರಾಂ ಗ್ರೂಪ್ನಲ್ಲಿ ಪ್ರಚೋದನಾಕಾರಿ ಚರ್ಚೆಗಳು ಹಾಗೂ ಮುಸ್ಲಿಂ ಪರವಾದ ಚಾಟಿಂಗ್ಗಳು ನಡೆಯುತ್ತಿದ್ದವು ಎಂದು ಪೊಲೀಸರು ತಿಳಿಸಿದ್ದಾರೆ.
ಚಿಕ್ಕಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಬಿಎನ್ಎಸ್ ಸೆಕ್ಷನ್ 113 ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಸದ್ಯ ಇಬ್ಬರೂ ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.