
ಪಶ್ಚಿಮ ಘಟ್ಟವನ್ನು ಪರಿಸರ ಸೂಕ್ಷ್ಮ ಪ್ರದೇಶವೆಂದು ಘೋಷಿಸುವ ಕೇಂದ್ರದ 7ನೇ ಕರಡು ಅಧಿಸೂಚನೆ ಕುರಿತು ಚರ್ಚಿಸಲು ರಾಜ್ಯ ಸರ್ಕಾರ ಒಂದು ದಿನದ ವಿಶೇಷ ಅಧಿವೇಶನ ಕರೆಯಲಿದೆ.
ಕರ್ನಾಟಕದ 10 ಜಿಲ್ಲೆಗಳ 33 ತಾಲೂಕುಗಳು ಮತ್ತು 1,449 ಗ್ರಾಮಗಳು ಈ ಅಧಿಸೂಚನೆಯ ವ್ಯಾಪ್ತಿಗೆ ಬರಲಿದ್ದು, ಒಟ್ಟು 20,668 ಚ.ಕಿ.ಮೀ ಪ್ರದೇಶ ಬಾಧಿತವಾಗಲಿದೆ.
ಕೇಂದ್ರದ ಈ ಏಕಪಕ್ಷೀಯ ನಿರ್ಧಾರವನ್ನು ರಾಜ್ಯ ಸರ್ಕಾರ ವಿರೋಧಿಸಿದ್ದು, 31 ಜುಲೈ 2024ರ ಕರಡು ಅಧಿಸೂಚನೆಯನ್ನು ಹಿಂಪಡೆಯುವಂತೆ ಮನವಿ ಮಾಡಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.