
ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ನೀಟ್ನಲ್ಲಿ ಸುಧಾರಣೆಗಳನ್ನು ಸಾಂಸ್ಥಿಕಗೊಳಿಸುವ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಬುಧವಾರ ಅಭಿಪ್ರಾಯಪಟ್ಟಿದೆ.
ರಾಧಾಕೃಷ್ಣನ್ ಸಮಿತಿ ಮತ್ತು ನಂದನ್ ನಿಲೇಕಣಿ ಸಮಿತಿಗಳ ಶಿಫಾರಸುಗಳನ್ನು ಜಾರಿಗೆ ತರಲು ಕೈಗೊಂಡಿರುವ ಕ್ರಮಗಳ ಕುರಿತು ವಿವರಣೆ ನೀಡುವಂತೆ ಎನ್ಟಿಎಗೆ ನ್ಯಾಯಪೀಠ ನಿರ್ದೇಶಿಸಿದೆ.
ನ್ಯಾಯಮೂರ್ತಿಗಳಾದ ಪಿ.ಎಸ್. ನರಸಿಂಹ ಮತ್ತು ಅಲೋಕ್ ಅರಾಧೆ ಅವರಿದ್ದ ಪೀಠವು, ಈ ವಿಷಯಕ್ಕೆ ಸಂಬಂಧಿಸಿದಂತೆ ಹೊಸ ಪ್ರಮಾಣಪತ್ರ ಸಲ್ಲಿಸಲು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರಿಗೆ ಸೂಚಿಸಿದೆ.