
ಕರ್ನಾಟಕ ಕ್ರಿಶ್ಚಿಯನ್ ಅಭಿವೃದ್ಧಿ ನಿಗಮದ ವಿದೇಶಿ ಶಿಕ್ಷಣ ಸಾಲ ಯೋಜನೆಯ ನಿಯಮಗಳನ್ನು ಪರಿಷ್ಕರಿಸಲು ಸಚಿವ ಯು.ಟಿ ಖಾದರ್ ಆದೇಶಿಸಿದ್ದಾರೆ.
ಕ್ರೈಸ್ತ ವಿದ್ಯಾರ್ಥಿಗಳಿಗೆ ವಿದೇಶದಲ್ಲಿ ಓದುವುದು ಸುಲಭವಾಗುವಂತೆ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ನಿಯಮಗಳನ್ನು ಪಾಲಿಸುವಂತೆ ಅವರು ಸೂಚನೆ ನೀಡಿದ್ದಾರೆ.
ವಿದ್ಯಾರ್ಥಿಗಳಿಗೆ ಸಮರ್ಪಕವಾಗಿ ಸಾಲ ಸಿಗುತ್ತಿಲ್ಲ ಎಂಬ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ಅವರು ಅಕ್ಟೋಬರ್ 28ರಂದು ಈ ಆದೇಶ ನೀಡಿದ್ದಾರೆ.