
ರಾಜ್ಯ ಸರ್ಕಾರಿ ಅಧಿಕಾರಿಗಳು ಮತ್ತು ನೌಕರರು ತಮ್ಮ 2025-26ನೇ ಸಾಲಿನ ಆಸ್ತಿ ಮತ್ತು ಹೊಣೆಗಾರಿಕೆ ವಿವರಗಳನ್ನು (IPR) ಆಗಸ್ಟ್ 20, 2026ರೊಳಗೆ ಕಡ್ಡಾಯವಾಗಿ ಆನ್ಲೈನ್ ಮೂಲಕ ಸಲ್ಲಿಸಬೇಕೆಂದು ಸರ್ಕಾರ ಆದೇಶಿಸಿದೆ.
ಇಲ್ಲಿಯವರೆಗೆ ಕೈಬರಹದ ಮೂಲಕ ಸಲ್ಲಿಸುತ್ತಿದ್ದ ವಾರ್ಷಿಕ ಕಾರ್ಯಕ್ಷಮತೆ ಮೌಲ್ಯಮಾಪನ ವರದಿ (APAR) ಮತ್ತು ಆಸ್ತಿ ವಿವರಗಳನ್ನು ಇನ್ನು ಮುಂದೆ e-PAR ಅಪ್ಲಿಕೇಶನ್ ಮೂಲಕವೇ ಡಿಜಿಟಲ್ ರೂಪದಲ್ಲಿ ಸಲ್ಲಿಸಬೇಕು.
ಈ ಹೊಸ ವ್ಯವಸ್ಥೆಯನ್ನು ರಾಷ್ಟ್ರೀಯ ಮಾಹಿತಿ ಕೇಂದ್ರ (NIC) ಅಭಿವೃದ್ಧಿಪಡಿಸಿದ್ದು, ಅಖಿಲ ಭಾರತ ಸೇವೆಗಳ ಅಧಿಕಾರಿಗಳ ಮಾದರಿಯಲ್ಲೇ ರಾಜ್ಯದ ಎಲ್ಲ ಸರ್ಕಾರಿ ನೌಕರರಿಗೂ ವಿಸ್ತರಿಸಲಾಗಿದೆ.