
ಯಲಹಂಕ ಹಾಗೂ ಹುಳಿಮಾವು ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಇಬ್ಬರು ಮೃತಪಟ್ಟಿದ್ದಾರೆ.
ದೊಡ್ಡಬೆಟ್ಟಹಳ್ಳಿ ಲೇಔಟ್ನಲ್ಲಿ ಸ್ಕೂಟರ್ ನಿಯಂತ್ರಣ ತಪ್ಪಿ ಮರಕ್ಕೆ ಅಪ್ಪಳಿಸಿದ್ದರಿಂದ ಟೆಕಿ ಪುನೀತ್ ಯಾದವ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಹುಳಿಮಾವು ವ್ಯಾಪ್ತಿಯ ಕೂಡ್ಲುಗೇಟ್ ಬಳಿ ಬೈಕ್ಗೆ ವಾಹನ ಡಿಕ್ಕಿ ಹೊಡೆದಿದ್ದರಿಂದ ಶುಶ್ರೂಷಕ ರಂಜಿತ್ ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲಿ ಮೃತಪಟ್ಟಿದ್ದಾರೆ.