
ಕೋಲ್ಕತ್ತದ ಆರ್–ಜಿ ಕರ್ ಆಸ್ಪತ್ರೆಯ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಸಂತ್ರಸ್ತೆಯ ಅಂತಿಮ ಸಂಸ್ಕಾರವನ್ನು ತರಾತುರಿಯಲ್ಲಿ ನಡೆಸಿದ ಆರೋಪದ ಮೇಲೆ ಟಿಎಂಸಿ ನಾಯಕ ಸೋಮನಾಥ್ ಡೇ ಅವರನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ.
ಪಾನೀಹಾಟಿ ಸ್ಥಳೀಯ ಸಂಸ್ಥೆಯ ಮಾಜಿ ಅಧ್ಯಕ್ಷರಾಗಿರುವ ಸೋಮನಾಥ್ ಡೇ, ತನಿಖೆ ಆರಂಭವಾದಾಗಿನಿಂದ ತಲೆಮರೆಸಿಕೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಈ ಪ್ರಕರಣದಲ್ಲಿ ಈ ಹಿಂದೆ ಪಾನೀಹಾಟಿ ಕ್ಷೇತ್ರದ ಮಾಜಿ ಶಾಸಕ ನಿರ್ಮಲ್ ಘೋಷ್ ಮತ್ತು ಸಂಜೀವ್ ಮುಖರ್ಜಿ ಅವರನ್ನು ಬಂಧಿಸಲಾಗಿದ್ದು, ಅವರು ಸದ್ಯ ಜಾಮೀನಿನ ಮೇಲೆ ಹೊರಗಿದ್ದಾರೆ.