
ದುಬೈನ ಅಂತರರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆದ ಏಷ್ಯಾಕಪ್ ಫೈನಲ್ ಪಂದ್ಯದಲ್ಲಿ ಭಾರತ ಮಹಿಳಾ ತಂಡವು ಶ್ರೀಲಂಕಾವನ್ನು ಮಣಿಸಿ ದಾಖಲೆಯ 8ನೇ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿದೆ.
ಮೊದಲು ಬ್ಯಾಟ್ ಮಾಡಿದ ಭಾರತ ಶಫಾಲಿ ವರ್ಮಾ ಮತ್ತು ಸ್ಮೃತಿ ಮಂಧಾನ ಅವರ ಅರ್ಧಶತಕಗಳ ಬಲದಿಂದ 20 ಓವರ್‌ಗಳಲ್ಲಿ 5 ವಿಕೆಟ್‌ಗಳಿಗೆ 183 ರನ್ ಕಲೆಹಾಕಿದರೆ, ಶ್ರೀಲಂಕಾ 111 ರನ್‌ಗಳಷ್ಟೇ ಗಳಿಸಿತು.
ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಏಷ್ಯಾಕಪ್ ಗೆದ್ದ ಭಾರತೀಯ ಮಹಿಳಾ ಕ್ರಿಕೆಟ್ ತಂಡವನ್ನು ಅಭಿನಂದಿಸಿ ಶ್ಲಾಘಿಸಿದ್ದಾರೆ.