
ದಕ್ಷಿಣ ಆಫ್ರಿಕಾ, ಜಿಂಬಾಬ್ವೆ ಮತ್ತು ನಮೀಬಿಯಾದಲ್ಲಿ 2027ರ ಅಕ್ಟೋಬರ್ 2 ರಿಂದ ನವೆಂಬರ್ 21 ರವರೆಗೆ ನಡೆಯಲಿರುವ ಐಸಿಸಿ ಏಕದಿನ ವಿಶ್ವಕಪ್ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, ಇದರಲ್ಲಿ 14 ತಂಡಗಳು 12 ಸ್ಥಳಗಳಲ್ಲಿ 57 ಪಂದ್ಯಗಳನ್ನು ಆಡಲಿವೆ.
ಐಸಿಸಿ ಬಿಡುಗಡೆ ಮಾಡಿರುವ ವೇಳಾಪಟ್ಟಿಯಂತೆ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ಒಂದೇ ಗುಂಪಿನಲ್ಲಿ ಸ್ಥಾನ ಪಡೆದಿದ್ದು, ಭಾರತ ತಂಡವು ಅಕ್ಟೋಬರ್ 7 ರಂದು ಕೇಪ್ ಟೌನ್ನಲ್ಲಿ ಆಸ್ಟ್ರೇಲಿಯಾ ವಿರುದ್ಧ ತನ್ನ ಅಭಿಯಾನ ಆರಂಭಿಸಲಿದೆ.
ಟೀಮ್ ಇಂಡಿಯಾ ತನ್ನ ಎರಡನೇ ಪಂದ್ಯವನ್ನು ಅಕ್ಟೋಬರ್ 10 ರಂದು ಜೋಹಾನ್ಸ್ಬರ್ಗ್ನಲ್ಲಿ ಪಾಕಿಸ್ತಾನದ ವಿರುದ್ಧ, ಮೂರನೇ ಪಂದ್ಯವನ್ನು ಅಕ್ಟೋಬರ್ 14 ರಂದು ಅಫ್ಘಾನಿಸ್ತಾನದ ವಿರುದ್ಧ ಮತ್ತು ಅಂತಿಮ ಗುಂಪು ಪಂದ್ಯವನ್ನು ಅಕ್ಟೋಬರ್ 24 ರಂದು ಜಿಂಬಾಬ್ವೆ ವಿರುದ್ಧ ಆಡಲಿದೆ.