
ಉತ್ತರ ಪ್ರದೇಶದ ಝಾನ್ಸಿ ಜಿಲ್ಲೆಯಲ್ಲಿ 19 ವರ್ಷದ ಬಿಎ ಪದವಿ ವಿದ್ಯಾರ್ಥಿ ಲವ ಪಟೇಲ್ ಮನೆಯಲ್ಲಿ ಯಾರೂ ಇಲ್ಲದ ವೇಳೆ ತಂದೆಯ ಲೈಸೆನ್ಸ್ ಹೊಂದಿದ್ದ ರಿವಾಲ್ವರ್ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಘಟನೆಗೂ ಮುನ್ನ ಮೊಬೈಲ್ನಲ್ಲಿ ವೀಡಿಯೊ ದಾಖಲಿಸಿರುವ ಯುವಕ, ಹಣವನ್ನು ನಿಮ್ಮ ಬಳಿಯೇ ಇಟ್ಟುಕೊಳ್ಳಿ, ನಾನು ಅಮ್ಮನ ಬಳಿಗೆ ಹೋಗುತ್ತಿದ್ದೇನೆ ಎಂದು ತಿಳಿಸಿ ತನ್ನ ನಿರ್ಧಾರಕ್ಕೆ ಯಾರೂ ಕಾರಣರಲ್ಲ ಎಂದಿದ್ದಾರೆ.
2009ರಲ್ಲಿ ತಾಯಿ ಆತ್ಮಹತ್ಯೆ ಮಾಡಿಕೊಂಡ ಬಳಿಕ ಯುವಕ ತೀವ್ರ ಮಾನಸಿಕ ಒತ್ತಡ ಹಾಗೂ ನಿದ್ರಾಹೀನತೆಯಿಂದ ಬಳಲುತ್ತಿದ್ದ1 ಎಂದು ಕುಟುಂಬಸ್ಥರು ತಿಳಿಸಿದ್ದಾರೆ.