
ವಿರಾಟ್ ಕೊಹ್ಲಿ ನ್ಯೂಜಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ 51 ಎಸೆತಗಳಲ್ಲಿ 74 ರನ್ ಗಳಿಸಿ, ಚೇಸಿಂಗ್ ವೇಳೆ ಅತಿ ಹೆಚ್ಚು ರನ್ ಗಳಿಸಿದ್ದ ಸಚಿನ್ ತೆಂಡೂಲ್ಕರ್ ಅವರ ವಿಶ್ವ ದಾಖಲೆಯನ್ನು ಮುರಿದರು.
ಏಕದಿನ ಕ್ರಿಕೆಟ್ನಲ್ಲಿ 3ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿ 13 ಸಾವಿರ ರನ್ ಪೂರೈಸಿದ ವಿಶ್ವದ ಮೊದಲ ಬ್ಯಾಟರ್ ಆದ ಕೊಹ್ಲಿ, ವಿದೇಶಿ ಪಿಚ್ಗಳಲ್ಲಿ 50 ಬಾರಿ 50+ ಸ್ಕೋರ್ ಗಳಿಸಿದ ವಿಶ್ವ ದಾಖಲೆ ನಿರ್ಮಿಸಿದರು.
ನ್ಯೂಜಿಲೆಂಡ್ ವಿರುದ್ಧ ಅತಿ ಹೆಚ್ಚು ರನ್ ಗಳಿಸಿದ್ದ ರಿಕ್ಕಿ ಪಾಂಟಿಂಗ್ ಅವರ ದಾಖಲೆಯನ್ನು ಸಮಗಟ್ಟಿದ ಕೊಹ್ಲಿ, ಏಕದಿನ ಕ್ರಿಕೆಟ್ನಲ್ಲಿ ನ್ಯೂಜಿಲೆಂಡ್ ವಿರುದ್ಧ ಅತಿ ಹೆಚ್ಚು ಕ್ಯಾಚ್ ಪಡೆದಿದ್ದ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು (20 ಕ್ಯಾಚ್ಗಳೊಂದಿಗೆ) ಮುರಿದರು.