
ಬಿಹಾರದ ಲಖಿಸರಾಯ್ ಜಿಲ್ಲೆಯ ಅಶೋಕ ಧಾಮ ದೇವಾಲಯದಲ್ಲಿ ಸೋಮವಾರ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ ಕನಿಷ್ಠ 7 ಭಕ್ತರು ಮೃತಪಟ್ಟಿದ್ದು, 12ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಶ್ರಾವಣ ಮಾಸದ ಮೂರನೇ ಸೋಮವಾರದಂದು ಸುಮಾರು 50 ಸಾವಿರಕ್ಕೂ ಅಧಿಕ ಭಕ್ತರು ಜಲಾಭಿಷೇಕಕ್ಕೆ ಆಗಮಿಸಿದ್ದಾಗ, ಬ್ಯಾರಿಕೇಡ್ ಮುರಿದು ಮತ್ತು ವಿದ್ಯುತ್ ಕಂಬ ಬಿದ್ದಿದೆ ಎಂಬ ವದಂತಿಯಿಂದ ಈ ಅವಘಡ ಸಂಭವಿಸಿದೆ.
ಘಟನೆಯಲ್ಲಿ ಗಾಯಗೊಂಡವರನ್ನು ಲಖಿಸರಾಯ್ ಸದರ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗಾಯಾಳುಗಳಲ್ಲಿ ಬಹುತೇಕರು ಮಹಿಳೆಯರಾಗಿದ್ದು ಹಲವರ ಸ್ಥಿತಿ ಗಂಭೀರವಾಗಿದೆ ಎಂದು ಜಿಲ್ಲಾಧಿಕಾರಿ ಶೈಲೇಂದ್ರ ಕುಮಾರ್ ತಿಳಿಸಿದ್ದಾರೆ.