
ಇನ್ಸ್ಟಾಗ್ರಾಮ್ನಲ್ಲಿ 5.6 ಮಿಲಿಯನ್ ಅನುಯಾಯಿಗಳನ್ನು ಹೊಂದಿರುವ 'ರಿಸರ್ವೇಷನ್ ಹಟಾವೋ ಆಂದೋಲನ' ದೆಹಲಿಯ ಜಂತರ್ ಮಂತರ್ನಲ್ಲಿ ಮೀಸಲಾತಿ ವಿರೋಧಿ ಪ್ರತಿಭಟನೆಗೆ ಕರೆ ನೀಡಿತ್ತು.
ಜಾತಿ ಆಧಾರಿತ ಮೀಸಲಾತಿ ರದ್ದುಗೊಳಿಸಿ, ಆರ್ಥಿಕ ಸ್ಥಿತಿಗತಿಯ ಆಧಾರದ ಮೇಲೆ ಬಡವರಿಗೆ ನೆರವು ನೀಡಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.
ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ದೆಹಲಿ ಪೊಲೀಸರು ಪ್ರತಿಭಟನೆಗೆ ಅನುಮತಿ ನಿರಾಕರಿಸಿ, ಜಂತರ್ ಮಂತರ್ ಪ್ರದೇಶದಲ್ಲಿ ಐದಕ್ಕಿಂತ ಹೆಚ್ಚು ಜನರು ಸೇರದಂತೆ ನಿಷೇಧ ಹೇರಿದ್ದರು.