
ಧಾರವಾಡದ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಹೈಕೋರ್ಟ್ ವಿಭಾಗೀಯ ಪೀಠ ಜಾಮೀನು ಮಂಜೂರು ಮಾಡಿದ್ದು, ಜೀವಾವಧಿ ಶಿಕ್ಷೆಯನ್ನು ಅಮಾನತ್ತಿನಲ್ಲಿಟ್ಟಿದೆ.
ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸುವುದಾಗಿ ಮೃತ ಯೋಗೇಶ್ ಗೌಡ ಅವರ ಸಹೋದರ ಗುರನಾಥ್ ಗೌಡ ಘೋಷಿಸಿದ್ದಾರೆ.
ಮೃತ ಯೋಗೇಶ್ ಗೌಡ ಅವರ ಪತ್ನಿ ಮಲ್ಲಮ್ಮ ಅವರು ತಾನು ಸುಪ್ರೀಂ ಕೋರ್ಟ್ಗೆ ಹೋಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದು, ಪ್ರಕರಣದಲ್ಲಿ ಹಣದ ವ್ಯವಹಾರ ನಡೆದಿದೆ ಎಂದು ಆರೋಪಿಸಿದ್ದಾರೆ.