
ಮೈಸೂರು ಜಿಲ್ಲೆಯ ಹುಣಸೂರು ಉಪ ವಿಭಾಗಾಧಿಕಾರಿ ಕಾವ್ಯಾರಾಣಿ ಅವರು ಕಂದಾಯ ಮೇಲ್ಮನವಿ ಇತ್ಯರ್ಥಪಡಿಸಲು 5.50 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಪೊಲೀಸರ ದಾಳಿಗೆ ಸಿಲುಕಿ ವಶಕ್ಕೆ ಒಳಗಾಗಿದ್ದಾರೆ.
ಒಟ್ಟು 10 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದ ಎಸಿ ಕಾವ್ಯಾರಾಣಿ, ಗುಮಾಸ್ತ ಶಿವಕುಮಾರ್ ಮೂಲಕ ಹಣ ಪಡೆಯುತ್ತಿದ್ದಾಗ ಡಿವೈಎಸ್‌ಪಿ ಶೈಲೇಂದ್ರ ನೇತೃತ್ವದ ತಂಡ ದಾಳಿ ನಡೆಸಿ ಹಣವನ್ನು ವಶಪಡಿಸಿಕೊಂಡಿದೆ.
ಪ್ರಸ್ತುತ ಲೋಕಾಯುಕ್ತ ಅಧಿಕಾರಿಗಳು ಎಸಿ ಕಾವ್ಯಾರಾಣಿ ಮತ್ತು ಗುಮಾಸ್ತ ಶಿವಕುಮಾರ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದು, ಮುಂದಿನ ಕಾನೂನು ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ.