
2007ರಲ್ಲಿ ಭಾರಿ ಪ್ರತಿಭಟನೆಗಳ ನಂತರ ಕೋಲ್ಕತ್ತಾ ತೊರೆದಿದ್ದ ಬಾಂಗ್ಲಾದೇಶಿ ಲೇಖಕಿ ತಸ್ಲೀಮಾ ನಸ್ರೀನ್, 19 ವರ್ಷಗಳ ಬಳಿಕ ಆಗಸ್ಟ್ 1ರ ಸಾಹಿತ್ಯಿಕ ಕಾರ್ಯಕ್ರಮಕ್ಕಾಗಿ ನಗರಕ್ಕೆ ಮರಳಿದ್ದಾರೆ.
ತಮಗೆ ಸೂಕ್ತ ಭದ್ರತೆ ಒದಗಿಸಿ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಗೌರವಿಸಿದ್ದಕ್ಕಾಗಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ತಸ್ಲೀಮಾ ಕೃತಜ್ಞತೆ ಸಲ್ಲಿಸಿದ್ದಾರೆ.
ಆಗಸ್ಟ್ 1ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ತಸ್ಲೀಮಾ ಅವರು ಸಿಎಂ ಸುವೇಂದು ಅಧಿಕಾರಿ ಮತ್ತು ಲೇಖಕ ಶಿರ್ಷೇಂದು ಮುಖೋಪಾಧ್ಯಾಯ ಅವರೊಂದಿಗೆ ವೇದಿಕೆ ಹಂಚಿಕೊಳ್ಳಲಿದ್ದಾರೆ.