
ಬಾರ್ ಕೌನ್ಸಿಲ್ ಆಫ್ ಇಂಡಿಯಾ (BCI) ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ ತಮ್ಮ ವಿರುದ್ಧದ ಅಕ್ರಮ ಆರೋಪಗಳನ್ನು ತಳ್ಳಿಹಾಕಿದ್ದು, ತಾವು ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾಗಿರುವುದಾಗಿ ಸಮರ್ಥಿಸಿಕೊಂಡಿದ್ದಾರೆ.
ಅಡ್ವೊಕೇಟ್ಸ್ ಕಾಯ್ದೆಯಡಿ ಅಧ್ಯಕ್ಷರ ಅಧಿಕಾರಾವಧಿಗೆ ಯಾವುದೇ ಮಿತಿ ಇಲ್ಲ ಎಂದು ತಿಳಿಸಿರುವ ಮಿಶ್ರಾ, ಇದು ತಮ್ಮ 7ನೇ ಅವಧಿಯ ಅಧಿಕಾರ ಎಂದು ಸ್ಪಷ್ಟಪಡಿಸಿದ್ದಾರೆ.
ತಮ್ಮ ರಾಜೀನಾಮೆಗೆ ಆಗ್ರಹಿಸಿ ಸಹ-ಅಧ್ಯಕ್ಷ ವೈ.ಆರ್. ಸದಾಶಿವ ರೆಡ್ಡಿ 15 ದಿನಗಳ ಗಡುವು ನೀಡಿದ್ದು, ಈ ಕುರಿತು ಸುಪ್ರೀಂ ಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ.