
ಲಷ್ಕರ್-ಎ-ತೈಬಾ ಉಗ್ರ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದ ಆರೋಪದ ಹಿನ್ನೆಲೆಯಲ್ಲಿ ಕಲಬುರಗಿಯ ಸರಾಫ್ ಬಜಾರ್ನಲ್ಲಿ ಚಿನ್ನಾಭರಣ ಕೆಲಸ ಮಾಡುತ್ತಿದ್ದ ಮಮ್ತಾಜ್ವುಲ್ ಮಲೀಕ್ ಎಂಬಾತನನ್ನು ಗುಪ್ತಚರ ಇಲಾಖೆ ಹಾಗೂ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪಶ್ಚಿಮ ಬಂಗಾಳ ಮೂಲದ ಈ ಆರೋಪಿಯು ಸಾಮಾಜಿಕ ಜಾಲತಾಣಗಳ ಮೂಲಕ ಉಗ್ರ ಸಂಘಟನೆಯೊಂದಿಗೆ ಸಂಪರ್ಕ ಸಾಧಿಸಿ, ಹಲವು ಮಹತ್ವದ ವಿಷಯಗಳನ್ನು ಮೆಸೇಜ್ ಮೂಲಕ ಹಂಚಿಕೊಂಡಿದ್ದ ಎಂಬ ಮಾಹಿತಿ ಲಭಿಸಿದೆ.
ಈ ಹಿಂದೆ ಬೀದರ್ ಮತ್ತು ದಾವಣಗೆರೆಯಲ್ಲಿಯೂ ಉಗ್ರರೊಂದಿಗೆ ನಂಟಿದ್ದವರನ್ನು ಎನ್ಐಎ ಹಾಗೂ ಸ್ಥಳೀಯ ಪೊಲೀಸರು ಬಂಧಿಸಿದ್ದು, ತನಿಖೆ ಮುಂದುವರಿದಿದೆ.