
ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ ಪ್ರತಿದಿನ 4,000 ಕ್ಯೂಸೆಕ್ ನೀರು ಬಿಡಲು ಆದೇಶವಾಗಿರುವ ಬೆನ್ನಲ್ಲೇ ಕರ್ನಾಟಕದಲ್ಲಿ ಕುಡಿಯುವ ನೀರಿಗೂ ಹಾಹಾಕಾರದ ಭೀತಿ ಎದುರಾಗಿದೆ.
ಪ್ರಸ್ತುತ ಕೆಆರ್‌ಎಸ್, ಕಬಿನಿ, ಹೇಮಾವತಿ ಮತ್ತು ಹಾರಂಗಿ ಜಲಾಶಯಗಳಲ್ಲಿ ಒಟ್ಟು 59 ಟಿಎಂಸಿ ನೀರು ಮಾತ್ರ ಸಂಗ್ರಹವಿದ್ದು, ಅದರಲ್ಲಿ 39 ಟಿಎಂಸಿ ನೀರು ಮಾತ್ರ ಬಳಕೆಗೆ ಲಭ್ಯವಿದೆ.
ಈ ನೀರಿನಲ್ಲಿ 15 ದಿನಗಳ ಕಾಲ ತಮಿಳುನಾಡಿಗೆ ನೀರು ಹರಿದರೆ 5.5 ಟಿಎಂಸಿ ನೀರು ಖಾಲಿಯಾಗಲಿದ್ದು, ಜನವರಿ ತಿಂಗಳ ಒಳಗಾಗಿಯೇ ಹನಿ ನೀರಿಗೂ ಪರದಾಟ ನಡೆಸಬೇಕಾಗಬಹುದು.