
ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ 'ಆರೋಗ್ಯ ಕವಚ 108' ಆಂಬುಲೆನ್ಸ್ ನೌಕರರು ನಾಳೆಯಿಂದ ಮುಷ್ಕರಕ್ಕೆ ಕರೆ ನೀಡಿದ್ದಾರೆ.
ಸಚಿವ ಯು.ಟಿ. ಖಾದರ್, 'ಎರಡು ತಿಂಗಳು 108 ಆಂಬುಲೆನ್ಸ್ ಸೇವೆ ಮೇಲೆ ಅವಲಂಬಿತರಾಗಬೇಡಿ' ಎಂದು ಹೇಳಿಕೆ ನೀಡಿರುವುದು ವಿವಾದ ಸೃಷ್ಟಿಸಿದೆ.
ಸರ್ಕಾರ ಹೊಸ ಟೆಂಡರ್ ಪ್ರಕ್ರಿಯೆ ನಡೆಸುತ್ತಿದ್ದು, ಡಿಸೆಂಬರ್ ಅಂತ್ಯದೊಳಗೆ ಸಮಸ್ಯೆ ಬಗೆಹರಿಯಲಿದೆ ಎಂದು ಸಚಿವರು ತಿಳಿಸಿದ್ದಾರೆ.