
ಬಾಗಲಕೋಟೆಯ ವಾಂಬೆ ಕಾಲೋನಿಯ ನಮ್ಮ ಕ್ಲಿನಿಕ್ ವೈದ್ಯಾಧಿಕಾರಿ ಡಾ. ಅಂಕಿತಾ ಯರಗಲ್ ಅವರನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಿ ಜಿಲ್ಲಾ ಆರೋಗ್ಯ ಅಧಿಕಾರಿಯವರು ಆದೇಶ ಹೊರಡಿಸಿದ್ದಾರೆ.
ವೈದ್ಯಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರೂ ಆರೋಗ್ಯ ಇಲಾಖೆಗೆ ಮಾಹಿತಿ ನೀಡದೆ ಎಂಡಿ ಪೆಥಾಲಜಿ ಅಧ್ಯಯನ ಮಾಡಿದ್ದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.
ಅಧಿಕೃತ ಅನುಮತಿ ಪಡೆಯದೆ ಎರಡೂ ಕಡೆ ಹಾಜರಾತಿ ಸಹಿ ಮಾಡಿದ್ದು ಹಾಗೂ ಅನಧಿಕೃತ ಗೈರುಹಾಜರಿಯು ಈ ಕರ್ತವ್ಯ ಲೋಪಕ್ಕೆ ಕಾರಣವಾಗಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.