
ಕರ್ನಾಟಕ ಸರ್ಕಾರವು 83 ಹೊಸ ಕೈಗಾರಿಕಾ ಯೋಜನೆಗಳಿಗೆ ಅನುಮೋದನೆ ನೀಡಿದ್ದು, ಇದರಿಂದ ರಾಜ್ಯಕ್ಕೆ ಒಟ್ಟು ₹6,252 ಕೋಟಿ ಬಂಡವಾಳ ಹರಿದುಬರಲಿದೆ ಎಂದು ಸಚಿವ ಎಂ.ಬಿ. ಪಾಟೀಲ ತಿಳಿಸಿದ್ದಾರೆ.
ಈ ಯೋಜನೆಗಳ ಅನುಷ್ಠಾನದಿಂದ ರಾಜ್ಯದಲ್ಲಿ ಸುಮಾರು 30 ಸಾವಿರಕ್ಕೂ ಹೆಚ್ಚು ನೇರ ಹಾಗೂ ಪರೋಕ್ಷ ಉದ್ಯೋಗಾವಕಾಶಗಳು ಸೃಷ್ಟಿಯಾಗಲಿದ್ದು, 69 ಯೋಜನೆಗಳು ಬೆಂಗಳೂರು ಹೊರತುಪಡಿಸಿ ಇತರ ಜಿಲ್ಲೆಗಳಲ್ಲಿ ಸ್ಥಾಪನೆಯಾಗಲಿವೆ.
ಜಸ್ವಿನ್ ವೆಂಚರ್ಸ್ ಮತ್ತು ಜಂಪನಾ ಕನ್ಸ್ಟ್ರಕ್ಷನ್ಸ್ ಕಂಪನಿಗಳು ದೊಡ್ಡಬಳ್ಳಾಪುರದಲ್ಲಿ ತಲಾ ₹475 ಕೋಟಿ ಮತ್ತು ₹465 ಕೋಟಿ ಹೂಡಿಕೆ ಮಾಡುತ್ತಿದ್ದು, ವಿವಿಧ ವಲಯಗಳಲ್ಲಿ ಬಂಡವಾಳ ಹೂಡಿಕೆ ನಡೆಯಲಿದೆ.