
ಹುಬ್ಬಳ್ಳಿಯಲ್ಲಿ ಮಾಂಜಾ ದಾರಕ್ಕೆ ಸಿಲುಕಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಬೆನ್ನಲ್ಲೇ, ಪೊಲೀಸರು ನಿಷೇಧಿತ ದಾರದ ವಿರುದ್ಧ ಕಾರ್ಯಾಚರಣೆ ತೀವ್ರಗೊಳಿಸಿದ್ದಾರೆ.
ಕಳೆದ ಎರಡು ದಿನಗಳಲ್ಲಿ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ 124 ಸ್ಥಳಗಳಲ್ಲಿ ಪರಿಶೀಲನೆ ನಡೆಸಿ 67 ಅಂಗಡಿಗಳನ್ನು ತಪಾಸಣೆ ಮಾಡಲಾಗಿದ್ದು, 63 ಸ್ಥಳಗಳಿಂದ ಅಪಾಯಕಾರಿ ದಾರವನ್ನು ವಶಪಡಿಸಿಕೊಳ್ಳಲಾಗಿದೆ.
ಮಹಾನಗರ ಪಾಲಿಕೆಯು 82 ವಾರ್ಡ್‌ಗಳಲ್ಲಿ ಧ್ವನಿವರ್ಧಕಗಳ ಮೂಲಕ ಜಾಗೃತಿ ಅಭಿಯಾನ ನಡೆಸುತ್ತಿದ್ದು, ಮರದಲ್ಲಿ ಮಾಂಜಾ ದಾರಕ್ಕೆ ಸಿಲುಕಿದ್ದ ಗೂಬೆಯನ್ನು ಯುವಕರೊಬ್ಬರು ರಕ್ಷಿಸಿದ್ದಾರೆ.