
ಉತ್ತರ ಕನ್ನಡ ಜಿಲ್ಲೆಯಲ್ಲಿ ಉದ್ದೇಶಿಸಿರುವ ಬೇಡ್ತಿ-ಅಘನಾಶಿನಿ ನದಿ ತಿರುವು ಮತ್ತು ಜೋಡಣೆ ಯೋಜನೆಗೆ ಕರಾವಳಿ ಹಾಗೂ ಮಲೆನಾಡು ಭಾಗದ ರೈತರು, ಕೃಷಿಕರು ಮತ್ತು ಮೀನುಗಾರರಿಂದ ತೀವ್ರ ವಿರೋಧ ವ್ಯಕ್ತವಾಗಿದೆ.
ಈ ಯೋಜನೆಯಿಂದ ಪಶ್ಚಿಮಘಟ್ಟದ ಜೀವವೈವಿಧ್ಯತೆ ಮತ್ತು ಅಘನಾಶಿನಿ ಮುಖಜ ಭೂಮಿ ನಾಶವಾಗುವ ಜತೆಗೆ ಅಂತರ್ಜಲ ಮಟ್ಟ ಕುಸಿಯುವ ಹಾಗೂ ಮೀನುಗಾರರ ಬದುಕಿಗೆ ಕಂಟಕವಾಗುವ ಆತಂಕವಿದೆ ಎಂದು ನಾಗರಿಕರು ಎಚ್ಚರಿಸಿದ್ದಾರೆ.
ಸೋಂದಾ ಸ್ವರ್ಣವಲ್ಲಿ ಶ್ರೀ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿಗಳ ಗೌರವಾಧ್ಯಕ್ಷತೆಯಲ್ಲಿ ಕಳೆದ ಒಂದು ವರ್ಷದಿಂದ ಜನಾಂದೋಲನ ನಡೆಯುತ್ತಿದ್ದು, ಬೆಂಗಳೂರು ಮತ್ತು ದೆಹಲಿಯಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಲಾಗಿದೆ.