
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಯಿಂದಾಗಿ ಶಾಲೆಗಳಿಗೆ ಸತತ ರಜೆ ನೀಡಲಾಗಿದ್ದರಿಂದ ಹಿಂದುಳಿದಿರುವ ಪಠ್ಯಕ್ರಮವನ್ನು ಪೂರ್ಣಗೊಳಿಸಲು ಶಿಕ್ಷಣ ಇಲಾಖೆ ಆದೇಶಿಸಿದೆ.
ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಸೆಪ್ಟೆಂಬರ್ 12ರಿಂದ ಪ್ರತಿ ಶನಿವಾರದಂದು ಪೂರ್ಣಾವಧಿ ತರಗತಿಗಳನ್ನು ನಡೆಸುವಂತೆ ಸೂಚಿಸಲಾಗಿದೆ.
ಅಗತ್ಯವಿದ್ದರೆ ಸಾರ್ವಜನಿಕ ರಜಾದಿನಗಳನ್ನೂ ಬಳಸಿಕೊಂಡು ವಿಶೇಷ ತರಗತಿಗಳನ್ನು ಆಯೋಜಿಸಲು ಹಾಗೂ ಹಾಜರಾತಿ ದಾಖಲೆಯನ್ನು ಕಡ್ಡಾಯವಾಗಿ ನಿರ್ವಹಿಸಲು ಆಡಳಿತ ಮಂಡಳಿಗಳಿಗೆ ತಿಳಿಸಲಾಗಿದೆ.