
ಚಾಮರಾಜನಗರ ಗಡಿ ಭಾಗದ ತಮಿಳುನಾಡಿನ ಗೂಡಲೂರಿನಲ್ಲಿ ಕಾಡಾನೆಗಳ ಹಿಂಡು ರೈತರ ಜಮೀನಿಗೆ ನುಗ್ಗಿ ತೆಂಗು ಮತ್ತು ಬಾಳೆ ಬೆಳೆಗಳನ್ನು ನಾಶಪಡಿಸಿವೆ.
ಸಿಸಿ ಕ್ಯಾಮೆರಾದಲ್ಲಿ ಸೆರೆಯಾದ ದೃಶ್ಯಗಳ ಪ್ರಕಾರ, ಆನೆಗಳು ತೆಂಗಿನ ಮರಗಳನ್ನು ಬುಡಸಮೇತ ಕಿತ್ತು ಎಳನೀರನ್ನು ಕುಡಿದಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ನಿರಂತರವಾಗಿ ನಡೆಯುತ್ತಿರುವ ಆನೆಗಳ ದಾಳಿಯಿಂದ ರೈತರು ಕಂಗಾಲಾಗಿದ್ದು, ಬೆಳೆ ಹಾನಿಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಅರಣ್ಯ ಇಲಾಖೆಯನ್ನು ಒತ್ತಾಯಿಸಿದ್ದಾರೆ.