
ಸಕಲೇಶಪುರದ ಯಡಕುಮಾರ-ಶ್ರೀವಾಗಿಲು ಮಧ್ಯೆ ಗುಡ್ಡ ಕುಸಿದ ಪರಿಣಾಮ ಬೆಂಗಳೂರು-ಕರಾವಳಿ ಸಂಪರ್ಕಿಸುವ ರೈಲುಗಳ ಸಂಚಾರ ರದ್ದಾಗಿದ್ದು, ನೂರಾರು ಪ್ರಯಾಣಿಕರು ನಿಲ್ದಾಣದಲ್ಲಿ ಸಿಲುಕಿದ್ದಾರೆ.
ಮಂಗಳೂರು-ವಿಜಯಪುರ, ಬೆಂಗಳೂರು-ಕಾರವಾರ (16595), ಬೆಂಗಳೂರು-ಮುರಡೇಶ್ವರ ಮತ್ತು ಬೆಂಗಳೂರು-ಕೋಝಿಕೋಡ್ ಎಕ್ಸ್‌ಪ್ರೆಸ್ ರೈಲುಗಳ ಸಂಚಾರವನ್ನು ನೈಋತ್ಯ ರೈಲ್ವೆ ರದ್ದುಗೊಳಿಸಿದೆ.
ಸೋಮವಾರದ ಹೊತ್ತಿಗೆ ಹಾಸನ-ಮಂಗಳೂರು ಮಾರ್ಗದಲ್ಲಿ ರೈಲು ಸಂಚಾರ ಪುನರಾರಂಭವಾಗುವ ಸಾಧ್ಯತೆಯಿದ್ದು, ಸದ್ಯ ನಿಲ್ದಾಣದಲ್ಲಿ ಸಿಲುಕಿರುವ ಪ್ರಯಾಣಿಕರಿಗೆ ಊಟ-ತಿಂಡಿಯ ವ್ಯವಸ್ಥೆ ಮಾಡಲಾಗಿದೆ.