
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಗ್ರಾಮ ಆಡಳಿತಾಧಿಕಾರಿ ಪರೀಕ್ಷೆಯಲ್ಲಿ 151.25 ಅಂಕ ಪಡೆದು ಪ್ರಥಮ ಸ್ಥಾನ ಪಡೆದಿದ್ದ ಹಾವೇರಿಯ ಶಂಕರ ಬನ್ನೂರು ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮೊಬೈಲ್ ಬಳಸಿ ಪರೀಕ್ಷೆ ಬರೆದಿರುವುದು ಉಪ ವಿಭಾಗಾಧಿಕಾರಿ ವಿಚಾರಣೆಯಿಂದ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಕೆಇಎ ಮೂಲಗಳು ತಿಳಿಸಿವೆ.
ಈ ಅಕ್ರಮದ ವಿರುದ್ಧ ತನಿಖೆ ನಡೆಸುವಂತೆ ವಿದ್ಯಾರ್ಥಿ ಸಂಘಟನೆಗಳು ಒತ್ತಾಯಿಸಿದ್ದವು.