
ದೆಹಲಿಯಲ್ಲಿ ಹೆಚ್ಚುತ್ತಿರುವ ಅತ್ಯಾಚಾರ ಮತ್ತು ದೌರ್ಜನ್ಯ ಪ್ರಕರಣಗಳ ಹಿನ್ನೆಲೆಯಲ್ಲಿ ಕಳವಳ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್, ಮಹಿಳೆಯರು ರಾತ್ರಿ 10 ಗಂಟೆಗೂ ಭಯವಿಲ್ಲದೆ ಸುರಕ್ಷಿತವಾಗಿ ಓಡಾಡುವ ವಾತಾವರಣ ಕಲ್ಪಿಸುವುದು ಪೊಲೀಸರ ಆದ್ಯ ಕರ್ತವ್ಯ ಎಂದು ಸೂಚಿಸಿದೆ.
ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದಿವಾಲಾ ಮತ್ತು ಕೆ. ವಿನೋದ್ ಚಂದ್ರನ್ ಅವರಿದ್ದ ಪೀಠವು, ಬಸ್, ಮೆಟ್ರೋ ನಿಲ್ದಾಣಗಳು ಹಾಗೂ ಶಾಲಾ-ಕಾಲೇಜು ಆವರಣಗಳಲ್ಲಿ ಹಗಲು ಮತ್ತು ರಾತ್ರಿ ಗಸ್ತು ಹೆಚ್ಚಿಸುವಂತೆ ದೆಹಲಿ ಪೊಲೀಸರಿಗೆ ಮತ್ತು ಕೇಂದ್ರ ಸರ್ಕಾರಕ್ಕೆ ನಿರ್ದೇಶಿಸಿದೆ.
ಡಿಡಿಎ ನಿರ್ವಹಿಸುವ 736 ಉದ್ಯಾನವನಗಳ ಪೈಕಿ ಕೇವಲ 16 ಪಾರ್ಕ್ಗಳಲ್ಲಿ ಮಾತ್ರ ಸಿಸಿಟಿವಿ ಕ್ಯಾಮೆರಾಗಳಿವೆ ಎಂದು ಲೆಕ್ಕಪರಿಶೋಧನೆಯಲ್ಲಿ ತಿಳಿದುಬಂದಿದ್ದು, ಪ್ರಕರಣದ ಮುಂದಿನ ವಿಚಾರಣೆಯನ್ನು ನವೆಂಬರ್ 16ಕ್ಕೆ ಮುಂದೂಡಲಾಗಿದೆ.