
ರಂಗಾಯಣದ ಮಾಜಿ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ನಿರ್ದೇಶನದ 'ಗಾಂಧಿ ಹತ್ಯೆಯ ಸತ್ಯ' ನಾಟಕ ಮೈಸೂರಿನಲ್ಲಿ ವಿವಾದ ಸೃಷ್ಟಿಸಿದೆ.
ಕಿರು ರಂಗಮಂದಿರದಲ್ಲಿ ಆಯೋಜಿಸಿದ್ದ ಈ ನಾಟಕ ಪ್ರದರ್ಶನವನ್ನು ನಿಲ್ಲಿಸುವಂತೆ ಒತ್ತಾಯಿಸಿ ಪಾಲಿಕೆ ಸದಸ್ಯರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದೆ.
ಇದು ಇತಿಹಾಸದ ಸತ್ಯಗಳು ಹಾಗೂ ನ್ಯಾಯಾಲಯದ ಹೇಳಿಕೆಗಳ ಆಧಾರಿತ ಕೃತಿ ಎಂದು ನಿರ್ದೇಶಕ ಅಡ್ಡಂಡ ಕಾರ್ಯಪ್ಪ ಸಮರ್ಥಿಸಿಕೊಂಡಿದ್ದಾರೆ.