ಬೆಂಗಳೂರಿನಲ್ಲಿ ಅಪ್ರಾಪ್ತ ಬಾಲಕಿಗೆ ನಕಲಿ ಪಿಸ್ತೂಲ್ ತೋರಿಸಿ ದರೋಡೆ ಮಾಡಿದ್ದ ಯು. ಅಶ್ರಫ್ ಮತ್ತು ಅಫ್ಜಲ್ ಎಂಬ ಇಬ್ಬರು ಆರೋಪಿಗಳನ್ನು ಜಗಜೀವನ ರಾಂ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಜುಲೈ 6ರಂದು ನಡೆದ ಈ ಕೃತ್ಯದಲ್ಲಿ ಆರೋಪಿಗಳು 8 ಲಕ್ಷ ರೂ. ನಗದು ಮತ್ತು 139 ಗ್ರಾಂ ಚಿನ್ನ ಸೇರಿದಂತೆ ಒಟ್ಟು 25.50 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ದೋಚಿದ್ದರು.
ಸಿಸಿಟಿವಿ ದೃಶ್ಯಾವಳಿ ಮತ್ತು ತಾಂತ್ರಿಕ ಸಾಕ್ಷ್ಯಾಧಾರಗಳನ್ನು ಆಧರಿಸಿ ತನಿಖೆ ನಡೆಸಿದ ಇನ್ಸ್ಪೆಕ್ಟರ್ ಕೆ. ಕಾಂತರಾಜ್ ನೇತೃತ್ವದ ತಂಡವು ಆರೋಪಿಗಳನ್ನು ಬಂಧಿಸಿ ದೋಚಿದ್ದ ಸೊತ್ತುಗಳನ್ನು ವಶಪಡಿಸಿಕೊಂಡಿದೆ.