
ಭಾರತೀಯ ಚಿತ್ರರಂಗದ ಬಹುನಿರೀಕ್ಷಿತ 'ರಾಮಾಯಣ' ಸಿನಿಮಾ ವಿಶ್ವದಾದ್ಯಂತ 50 ಸಾವಿರಕ್ಕೂ ಹೆಚ್ಚು ಪರದೆಗಳಲ್ಲಿ ಬಿಡುಗಡೆಯಾಗಿದೆ. ಚಿತ್ರದಲ್ಲಿ ರಣಬೀರ್ ಕಪೂರ್ ರಾಮನಾಗಿ, ಸಾಯಿ ಪಲ್ಲವಿ ಸೀತೆಯಾಗಿ ಮತ್ತು ಯಶ್ ರಾವಣನ ಪಾತ್ರದಲ್ಲಿ ನಟಿಸಿದ್ದಾರೆ.
₹2,000 ಕೋಟಿ ಭಾರಿ ಬಜೆಟ್‌ನಲ್ಲಿ ನಿರ್ಮಾಣವಾಗಿರುವ ಈ ಚಿತ್ರದ ವಿಎಫ್‌ಎಕ್ಸ್ ಮತ್ತು 3D ತಂತ್ರಜ್ಞಾನಕ್ಕೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ವಿಶೇಷವಾಗಿ ರಾವಣನಾಗಿ ನಟಿಸಿರುವ ಕನ್ನಡಿಗ ನಟ ಯಶ್ ಅವರ ನಟನೆಗೆ ಪ್ರೇಕ್ಷಕರು ಮತ್ತು ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದು, ಸಿನಿಮಾ ಅತ್ಯುತ್ತಮ ಕಮ್‌ಬ್ಯಾಕ್ ಎಂದು ಬಣ್ಣಿಸಿದ್ದಾರೆ.