
ಶಾಲಾ ಆರಂಭವಾಗಿ ಎರಡು ತಿಂಗಳು ಕಳೆದರೂ ಕಲಬುರಗಿ ಜಿಲ್ಲೆಯ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಉಚಿತ ಶೂ ಮತ್ತು ಸಾಕ್ಸ್ ವಿತರಣೆಯಾಗಿಲ್ಲ.
ಜಿಲ್ಲೆಯಲ್ಲಿ 1 ಲಕ್ಷ 94 ಸಾವಿರದ 850 ಮಕ್ಕಳು ಶೂಗಾಗಿ ನೋಂದಣಿ ಮಾಡಿಕೊಂಡಿದ್ದು, ಸರ್ಕಾರವೇ ಟೆಂಡರ್ ಕರೆದಿರುವ ಕಾರಣ ವಿತರಣೆ ವಿಳಂಬವಾಗಿದೆ ಎಂದು ಡಿಡಿಪಿಐ ಶಂಕ್ರಮ್ಮ ಢವಳಗಿ ತಿಳಿಸಿದ್ದಾರೆ.
ಶೂ ಇಲ್ಲದ ಕಾರಣ ಬಡ ವಿದ್ಯಾರ್ಥಿಗಳು ಬರಿಗಾಲಿನಲ್ಲಿ ಅಥವಾ ಚಪ್ಪಲಿ ಹಾಕಿಕೊಂಡು ಶಾಲೆಗೆ ಬರುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಮಕ್ಕಳು ಅಳಲು ತೋಡಿಕೊಂಡಿದ್ದಾರೆ.